ಕುಮಟಾ: ಕುಮಟಾ ಭಾಗದ ಜನತೆ ಬೆಚ್ಚಿ ಬೀಳುವಂಥ ಘಟನೆಯೊಂದು ನಡೆದಿದ್ದು, ಮನೆಗೆ ಚಿರತೆಯೊಂದು ನುಗ್ಗಿ ಮಗುವನ್ನು ಹೊತ್ತೊಯ್ಯಲು ಪ್ರಯತ್ನಸಿದ ಬಗ್ಗೆ ತಾಲೂಕಿನ ಬರ್ಗಿ ಗ್ರಾಮದಲ್ಲಿ ನಡೆದಿದೆ.
ಬರ್ಗಿಯ ನಾರಾಯಣ ನಾಯ್ಕ ಎಂಬುವವರ ಮನೆಗೆ ರಾತ್ರಿ ವೇಳೆ ಮನೆಗೆ ನುಗ್ಗಿದ ಚಿರತೆ ಮನೆಯಲ್ಲಿದ್ದ ಚಿಕ್ಕ ಮಗುವಿನ ಮೇಳೆ ದಾಳಿ ನಡೆಸಿ ಹೊತ್ತೊಯ್ಯಲು ಪ್ರಯತ್ನಿಸಿದೆ. ಈ ವೇಳೆ ಮನೆಯ ಜನರು ಮಗುವನ್ನು ರಕ್ಷಿಸಿಕೊಂಡಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ದಿನದಿಂದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತಿದ್ದು ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.