• Slide
    Slide
    Slide
    previous arrow
    next arrow
  • ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನ

    300x250 AD

    ನವದೆಹಲಿ: ಸೌಥ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 4103 ಟ್ರೇಡ್ ಅಪ್ರೆಂಟಿಸ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.


    ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿಗೆ ಒಟ್ಟೂ 4103 ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

    300x250 AD


    ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಬ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
    ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100. ಎಸ್‍ಸಿ-ಎಸ್‍ಟಿ-ಅಂಗವಿಕಲ-ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಸ್‍ಎಸ್‍ಎಲ್‍ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.


    ಆಸಕ್ತ ಅಬ್ಯರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‍ಸೈಟ್ https://scr.indianrailways.gov.in ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆಗೆ ನ.3 ಕೊನೆಯ ದಿನವಾಗಿದ್ದು ಅಷ್ಟರೊಳಗಾಗಿ ಅಬ್ಯರ್ಥಿಗಳು ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top