ಶಿರಸಿ: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನೋತ್ಸವ ಹಾಗು ಮಾಧ್ಯಮಶ್ರೀ ಪ್ರಶಸ್ತಿ ಸಮಾರಂಭವನ್ನು ಅ.13 ರಂದು ಬೆಳಿಗ್ಗೆ 10.30 ಕ್ಕೆ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸಲಿದ್ದು, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮಾಧ್ಯಮಶ್ರೀ ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣಭಟ್ ಗೌರವ ಉಪಸ್ಥಿತಿಯಿರಲಿದ್ದು ಮುಖ್ಯ ಅತಿಥಿಗಳಾಗಿ ಎಂಇಎಸ್ ಉಪಾಧ್ಯಕ್ಷ ಭೀಮಣ್ಣಟಿ ನಾಯ್ಕ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕೆಎಂಎಫ್ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ ಆರ್ ಸಂತೋಷಕುಮಾರ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ವಿರುಪಾಕ್ಷ ಹೆಗಡೆ ಕಂಚಿಕೈ ಇವರಿಗೆ ಮಾಧ್ಯಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವದು. ಪತ್ರಿಕಾ ಹಾಗೂ ಟಿವಿ ಮಾಧ್ಯಮದ ಅಭಿಮಾನಿಗಳು ಓದುಗರು ಭಾಗವಹಿಸುವಂತೆ ಸಂಘದ ಅಧ್ಯಕ್ಷ ಜೆ ಆರ್ ಸಂತೋಷಕುಮಾರ ಹಾಗೂ ಕಾರ್ಯದರ್ಶಿ ಸಂದೇಶ ಭಟ್ ಬೆಳಖಂಡ ಂಟಿಯಾಗಿ ತಿಳಿಸಿದ್ದಾರೆ.